ಯುವ ಪ್ರತಿಭೆಗಳನ್ನು ಗುರುತಿಸುವ ಕ್ರೀಡೆಗಳು
ಕೊಪ್ಪಳ, 15 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಕುಂಭಮೇಳ ಎಂದೆ ಪ್ರಸಿದ್ದವಾದ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಯುವ ಪ್ರತಿಭೆಗಳನ್ನು ಗುರುತಿಸಲು ಮ್ಯಾರಥಾನ್ ಸೇರಿದಂತೆ ಹಲವಾರು ಕ್ರೀಡಾ ಕಾರ್ಯಕ್ರಮಗಳನ್ನು ಕೊಪ್ಪಳ ನಗರದಲ್ಲಿ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂ
ಯುವ ಪ್ರತಿಭೆಗಳನ್ನು ಗುರುತಿಸುವ ಕ್ರೀಡೆಗಳು


ಯುವ ಪ್ರತಿಭೆಗಳನ್ನು ಗುರುತಿಸುವ ಕ್ರೀಡೆಗಳು


ಯುವ ಪ್ರತಿಭೆಗಳನ್ನು ಗುರುತಿಸುವ ಕ್ರೀಡೆಗಳು


ಕೊಪ್ಪಳ, 15 ಜನವರಿ (ಹಿ.ಸ.) :

ಆ್ಯಂಕರ್ : ದಕ್ಷಿಣ ಭಾರತದ ಕುಂಭಮೇಳ ಎಂದೆ ಪ್ರಸಿದ್ದವಾದ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಯುವ ಪ್ರತಿಭೆಗಳನ್ನು ಗುರುತಿಸಲು ಮ್ಯಾರಥಾನ್ ಸೇರಿದಂತೆ ಹಲವಾರು ಕ್ರೀಡಾ ಕಾರ್ಯಕ್ರಮಗಳನ್ನು ಕೊಪ್ಪಳ ನಗರದಲ್ಲಿ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದ್ದಾರೆ.

ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಕೊಪ್ಪಳ ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೊಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಕ್ರೀಡೆಗಳ ಆಯೋಜನೆಗೆ ಜಿಲ್ಲೆಯ ಜನಪ್ರತಿನಿಧಿಗಳು. ವಾಣಿಜ್ಯೋದ್ಯಮಿಗಳು ಹಾಗೂ ಸಂಘ- ಸಂಸ್ಥೆಯವರು ಸಹಕಾರ ನೀಡಿದ್ದಾರೆ. 15 ದಿನಗಳವರೆಗೆ ವಿವಿಧ ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಇದರ ಯಶಸ್ವಿಗೆ ಮಾಧ್ಯಮ ಪ್ರತಿನಿಧಿಗಳು ಎಲ್ಲಾ ಕಾರ್ಯಕ್ರಮಗಳ ಹೆಚ್ಚಿನ ಪ್ರಚಾರ ನೀಡುತ್ತಿದ್ದಾರೆ. ಎಲ್ಲರೂ ಸೇರಿ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಮೆರಗು ತರೋಣ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.

ಮಾಜಿ ಸಂಸದರಾದ ಸಂಗಣ್ಣ ಕರಡಿ ಅವರು ಮಾತನಾಡಿ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಕಳೆದ ಹತ್ತು ವರ್ಷಗಳಿಂದ ಮ್ಯಾರಥಾನ್ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಬರಲಾಗುತ್ತಿದೆ. ಇದರಿಂದ ಎಲ್ಲಾ ಕ್ರೀಡಾ ಪಟುಗಳನ್ನು ಒಟ್ಟಿಗೆ ಸೇರಿಸಲು ಅನುಕೂಲವಾಗಲಿದೆ ಮತ್ತು ಕ್ರೀಡಾ ಪಟುಗಳು ಇದರಲ್ಲಿ ಭಾಗವಹಿಸುವುದರಿಂದ ಅವರ ಉತ್ಸಾಹ ಇಮ್ಮಡಿ ಆಗಲಿದೆ ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಮಾತನಾಡಿ ಮೈಸೂರು ದಸರಾದಂತೆ ನಮ್ಮಲ್ಲಿಯೂ ಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕ್ರೀಡಾ ಕಾರ್ಯಕ್ರಮಗಳು ನಡೆಯಬೇಕು. ಕ್ರೀಡೆಯಿಂದ ಯುವಕರು ಮಾನಸಿಕ ಮತ್ತು ದೈಹಿಕವಾಗಿ ಸಬಲರಾಗುತ್ತಾರೆ. ಇಂದಿನ ಒತ್ತಡ ಜೀವನ ಬದುಕಿನಲ್ಲಿ ಕ್ರೀಡೆ ತುಂಭಾ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ ಇಂದಿನ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದು ಕ್ರೀಡೆ ಎಲ್ಲರಿಗೂ ಒಟ್ಟಿಗೆ ಸೇರಿಸುವದರ ಜೊತೆಗೆ ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಭಾಗವಹಿಸುವದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಮ್ಯಾರಥಾನ್ ಓಟ ಹಳೆ ಆರ್.ಟಿ.ಓ ಕಛೇರಿ ಹತ್ತಿರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾಗಿ. ಗಂಜ ಸರ್ಕಲ್. ಅಶೋಕ ವೃತ್ತ. ಗಡಿಯಾರ ಕಂಬದ ಮಾರ್ಗವಾಗಿ ಗವಿಮಠದವರೆಗೆ ನಡೆಯಿತು. ಇದರಲ್ಲಿ ಭಾಗವಹಿಸಿ ಪ್ರಥಮ. ದ್ವಿತೀಯ. ತೃತೀಯ ಸೇರಿದಂತೆ ಒಟ್ಟು ಎಂಟು ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಗವಿಮಠದಲ್ಲಿ ಪ್ರಶಸ್ತಿ ಫಲಕದ ಜೊತೆಗೆ ನಗದು ಬಹುಮಾನವನ್ನು ಗಣ್ಯರಿಂದ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ ಗುಪ್ತಾ. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ. ಕ್ರೀಡಾ ಇಲಾಖೆಯ ಅಧಿಕಾರಿ ವಿಠ್ಠಲ ಚಾಬಗೌಡರ, ಕೃಷ್ಣ ಇಟಂಗಿ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರೆ ಹಲವಾರು ಜನರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande