ನವದೆಹಲಿ, 15 ಜನವರಿ (ಹಿ.ಸ.) :
ಆ್ಯಂಕರ್ : ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶಗಳು ಇನ್ನೂ ಬಹಿರಂಗವಾಗಿಲ್ಲ, ಈ ವಿಚಾರಗಳ ಕುರಿತು ಬರೀ ಊಹಾಪೋಹಗಳ ಮೇಲೆ ಪರ ವಿರೋಧ ಚರ್ಚೆ ಅನವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಮುಂದಿನ ಸಂಪುಟ ಸಭೆಯಲ್ಲಿ ಈ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa