ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ :ಕನ್ನಡ ಚಿತ್ರರಂಗ ಹಾಗೂ ದೂರದರ್ಶನದ ರಂಗದ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್ ಅಧಿಕೃತವಾಗಿ ತಿಳಿಸಿದ್ದಾರೆ.
ಅವರು ಕಳೆದ ಕೆಲ ದಿನಗಳಿಂದಲೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಯಶಂಪುರ ಬಳಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸರಿಗಮ ವಿಜಿ ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ. ನಾಳೆ ಬೆಳಿಗ್ಗೆ 10 ರಿಂದ 12 ಗಂಟೆಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV