ಸತತ ಎರಡನೇ ದಿನ ಚಿನ್ನ,ಬೆಳ್ಳಿ ಬೆಲೆಯಲ್ಲಿ ಏರಿಕೆ
ನವದೆಹಲಿ, 17 ಜನವರಿ (ಹಿ.ಸ.) : ಆ್ಯಂಕರ್ : ದೇಶಿಯ ಚಿನಿವಾರ ಮಾರುಕಟ್ಟೆಯಲ್ಲಿ ಸತತ ಎರಡನೇ ದಿನವಾದ ಇಂದು ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿನ ಏರಿಕೆಯಿಂದಾಗಿ ಇಂದು ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 80,620 ರಿಂದ 80,770
Gold silver


ನವದೆಹಲಿ, 17 ಜನವರಿ (ಹಿ.ಸ.) :

ಆ್ಯಂಕರ್ : ದೇಶಿಯ ಚಿನಿವಾರ ಮಾರುಕಟ್ಟೆಯಲ್ಲಿ ಸತತ ಎರಡನೇ ದಿನವಾದ ಇಂದು ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿನ ಏರಿಕೆಯಿಂದಾಗಿ ಇಂದು ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 80,620 ರಿಂದ 80,770 ರೂ. ಅದೇ ರೀತಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 73,900 ರಿಂದ 74,050 ರೂ.ವರೆಗೆ ಮಾರಾಟವಾಗುತ್ತಿದೆ. ಬೆಳ್ಳಿಯ ಬೆಲೆಯಲ್ಲಿನ ಏರಿಕೆಯಿಂದಾಗಿ, ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 95,500 ರೂ. ಆಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande