ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಪ್ರಕರಣ - ಆರೋಪಿ ಬಂಧನ
ಮುಂಬೈ ,17 ಜನವರಿ (ಹಿ.ಸ.): ಆ್ಯಂಕರ್ :ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಬಾಂದ್ರಾ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸ
ಸೈಫ್ ಅಲಿ ಖಾನ್ ಹಲ್ಲೆ ಪ್ರಕರಣ - ಆರೋಪಿ ಬಂಧನ..


ಮುಂಬೈ ,17 ಜನವರಿ (ಹಿ.ಸ.):

ಆ್ಯಂಕರ್ :ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಬಾಂದ್ರಾ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯನ್ನು ಪತ್ತೆ ಹಚ್ಚಲು 20 ತಂಡಗಳನ್ನು ರಚಿಸಲಾಗಿತ್ತು. ದಾಳಿ ನಡೆದ 33 ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande