ದೋಹಾ,2 ಜನವರಿ (ಹಿ.ಸ.) :
ಆ್ಯಂಕರ್ : ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರು ಕತಾರ್‌ನ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬುಲ್ ರೆಹಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಹಕಾರದ ಬಗ್ಗೆ ಸಮಾಲೋಚನೆ ನಡೆಸಿದರು.
ಅಲ್ಲದೆ, ಉಭಯ ನಾಯಕರು ಇತ್ತೀಚಿನ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
ಮೂರು ದಿನಗಳ ಭೇಟಿಗಾಗಿ ಸೋಮವಾರ ಕತಾರ್‌ಗೆ ಆಗಮಿಸಿದ ಜೈಶಂಕರ್ ಅವರ ಈ ವರ್ಷದ ಮೊದಲ ರಾಜತಾಂತ್ರಿಕ ಮಾತುಕತೆಯಲ್ಲಿ ಭಾಗವಹಿಸಿದ್ದರು. ಅವರ ಭೇಟಿಯು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ಭದ್ರತೆ, ಸಾಂಸ್ಕೃತಿಕ ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳನ್ನು ಪರಿಶೀಲಿಸಲು ಎರಡೂ ದೇಶಗಳಿಗೆ ಅನುವು ಮಾಡಿಕೊಟ್ಟಿದೆ. ಜೈಶಂಕರ್ ಆರು ದಿನಗಳ ಅಮೆರಿಕಾ ಭೇಟಿಯ ನಂತರ ಕತಾರ್‌ಗೆ ಪ್ರಯಾಣಿಸಿದರು. ಅಲ್ಲಿ ಅವರು ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಆಡಳಿತದ ಅಧಿಕಾರಿಗಳು ಮತ್ತು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರ ತಂಡದ ಸದಸ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ