ಬೆಂಗಳೂರು, 2 ಜನವರಿ (ಹಿ.ಸ.) :
ಆ್ಯಂಕರ್ :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ ಬೆಂಗಳೂರಿನ ನಿಮ್ಹಾನ್ಸ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ. ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು, ಬೆಳಗಾವಿಗೆ ಭೇಟಿ ನೀಡಲಿದ್ದು, ಅಲ್ಲಿ ಕೆ.ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕ ಸೇವೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಜಗದೀಶ ಶೆಟ್ಟರ್, ಮತ್ತಿತರರು ಭಾಗವಹಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ