ರಾಯಚೂರು, 02 ಜನವರಿ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್‍ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ಫೆಲೋಶಿಪ್‍ಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ಶಾಸಬದ್ದ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್‍ಲೈನ್ ಮೂಲಕ ಅರ್ಜಿಯನ್ನು ಜಿಲ್ಲಾ ಕಚೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅರ್ಜಿಯನ್ನು ಜ.20ರ ಸಂಜೆ 5.30ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ ಸೈಟ್; https://bcwd.karnataka.gov.in ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ:8050770004, 08532295996ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್