ನವದೆಹಲಿ, 2 ಜನವರಿ (ಹಿ.ಸ.) :
ಆ್ಯಂಕರ್ :
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿದೆ.
ಈ ಕುರಿತು ಕೇಂದ್ರ ಸರ್ಕಾರ ಇಂದು ಸರ್ವೋಚ್ಚ ನ್ಯಾಯಾಲಯಕ್ಕೆಈ ಬಗ್ಗೆ ಮಾಹಿತಿ ನೀಡಿದೆ.
ಕೇಂದ್ರದ ಈ ಮಾಹಿತಿಯ ನಂತರ, ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಮೂರು ತಿಂಗಳ ಕಾಲ ಮುಂದೂಡಿತು. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್‌ನಲ್ಲಿ ನಡೆಯಲಿದೆ.
ಇಂದಿನ ವಿಚಾರಣೆ ವೇಳೆ ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಆ ವರದಿಯ ಎಲ್ಲಾ ಶಿಫಾರಸುಗಳನ್ನು ಸರಕಾರ ಜಾರಿಗೊಳಿಸಲಿದೆ ಎಂದು ಹೇಳಿದರು. ಇದಕ್ಕೆ ಮೆಹ್ತಾ ಕಾಲಾವಕಾಶ ಕೋರಿದ್ದು, ಬಳಿಕ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಮೂರು ತಿಂಗಳ ಕಾಲ ಮುಂದೂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ