ಕೋಲಾರ ಸಹಕಾರಿ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ
ಕೋಲಾರ ಸಹಕಾರಿ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ
ಕೋಲಾರ ತಾಲ್ಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆಯಾದರು.


ಕೋಲಾರ, ಜನವರಿ ೨೩ (ಹಿ.ಸ) :

ಆ್ಯಂಕರ್ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದಿಂದ ಗೆದ್ದು ಕಾಂಗ್ರೆಸ್ ಪಕ್ಷಕೆ ಸೇರ್ಪಡೆಯಾದ ಕೆಂದಟ್ಟಿ ಎ.ಶಿವಕುಮಾರ್, ಉಪಾಧ್ಯಕ್ಷರಾಗಿ ಸರ್ಕಾರದಿಂದ ನಾಮನಿರ್ದೇಶನವಾದ ಜಂಬಾಪುರ ವೆಂಕಟರಾಮ್ ಆಯ್ಕೆಯಾದರು.

ಕೋಲಾರ ನಗರದ ಪಿಎಲ್‌ಡಿ ಬ್ಯಾಂಕ್ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿAದ ಎ ಶಿವಕುಮಾರ್, ಜೆಡಿಎಸ್ ಬಿಜೆಪಿ ಮೈತ್ರಿಯಿಂದ ವಿ.ಎಂ ವೆಂಕಟೇಶಪ್ಪ ನಾಮಪತ್ರ ಸಲ್ಲಿಸಿದರು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಜಂಜಾಪುರ ವೆಂಕಟರಾಮ್ ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿಯಿಂದ ಅಂಬಿಕಾ ನಾಮಪತ್ರ ಸಲ್ಲಿಸಿದರು ಚುನಾವಣೆ ನಡೆದು ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಇಬ್ಬರು ಕೇವಲ ಒಂದು ಮತದ ಅಂತರದಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾದರು

ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದನೆ ಸಲ್ಲಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಯು ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದನ್ನು ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ನೂತನ ಅಧ್ಯಕ್ಷ ಎ.ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬ್ಯಾಂಕ್ ಅಭಿವೃದ್ಧಿ ಸಾಧ್ಯವಿದ್ದು ಅನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಸರಕಾರದಿಂದ ರೈತರಿಗೆ ಸಿಗುವ ಸಾಲ ಸೌಲಭ್ಯ ಒದಗಿಸುವಲ್ಲಿ ಮತ್ತು ಬ್ಯಾಂಕ್ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ನನ್ನನ್ನು ಬ್ಯಾಂಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ಎನ್.ಜಿ ಬ್ಯಾಟಪ್ಪ, ವೆಲಗಲಬುರ್ರೆ ಶಶಿಧರ್, ಟಿ.ಕೆ ಬೈರೇಗೌಡ, ವೆಂಕಟಲಕ್ಷ್ಮಮ್ಮ, ಮುನಿರತ್ನ, ಲಕ್ಷ್ಮಮ್ಮ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ನಾಗನಾಳ ಸೋಮಣ್ಣ, ಖಾಜಿಕಲ್ಲಹಳ್ಳಿ ಮುನಿರಾಜು, ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ,ಷಂಷೀರ್ ಸಿಎಂಎA ಮಂಜುನಾಥ್, ಚಂದ್ರಮೌಳಿ, ಮುಂತಾದವರು ಇದ್ದರು ಚುನಾವಣಾಧಿಕಾರಿ ಯಾಗಿ ಮುಸ್ತಫಾ ಕಾರ್ಯನಿರ್ವಹಿಸಿದರು.

ಚಿತ್ರ : ಕೋಲಾರ ತಾಲ್ಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆಯಾದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande