ಕಲಬುರಗಿ ,23ಜನವರಿ (ಹಿ.ಸ.):
ಆ್ಯಂಕರ್ : ಟ್ಯಾಂಕರ್ ಹಾಗೂ ಲಾರಿ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಸಂಭವಿಸಿ ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಕಲಬುರಗಿ ತಾಲೂಕಿನ ಗೊಬ್ಬೂರ ಕ್ರಾಸ್ ಬಳಿ ನಡೆದಿದೆ.
ಅಫಜಲಪುರದಿಂದ ಕಲಬುರಗಿ ಕಡೆ ಬರುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಅನಿಲ್ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೊಂದಡೆ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV