ಬೆಂಗಳೂರು, 23 ಜನವರಿ (ಹಿ.ಸ.) :ಆ್ಯಂಕರ್ :ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು.
ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು.
ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ ವಿನಿಮಯ ನಡೆಸಲಾಯಿತು.
ಕಂಪನಿಯು ಬೆಂಗಳೂರಿನಲ್ಲಿ ಹೊಂದಿರುವ ಸ್ಯಾಫ್ರಾನ್ ಡೇಟಾ ಸಿಸ್ಟಮ್ಸ್ ಮತ್ತು ಸ್ಯಾಫ್ರಾನ್ ಹೆಲಿಕಾಪ್ಟರ್ ಎಂಜಿನ್ಸ್ ಕಚೇರಿಗಳು ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ರಾಸ್ ಅವರು ಈ ಸಂದರ್ಭದಲ್ಲಿ ವಿಸ್ತೃತ ಮಾಹಿತಿ ನೀಡಿದರು.
ಕೃಷಿ ಸಚಿವ ಚೆಲುವರಾಯಸ್ವಾಮಿ, ಮುಖ್ಯಮಂತ್ರಿ ಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV