ಹಿರಿಯೂರು,23 ಜನವರಿ (ಹಿ.ಸ.) :
ಆ್ಯಂಕರ್ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹಿರಿಯೂರು ಹೆಲಿಪ್ಯಾಡ್ ಗೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಮಾರಿ ಕಣಿವೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾಣಿ ವಿಲಾಸ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು.
ಉಪ ಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವರಾದ ಡಿ .ಕೆ.ಶಿವಕುಮಾರ್, ಸಚಿವ ಸುಧಾಕರ್, ಮಾಜಿ ಸಚಿವ ಹೆಚ್.ಆಂಜನೇಯ ಸೇರಿ ಜಿಲ್ಲೆಯ ಶಾಸಕರು, ಪಕ್ಷದ ಮುಖಂಡರು ಮತ್ತು ಜಲ ಸಂಪನ್ಮೂಲ ಇಲಾಖೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV