ಗಾಜಾ, 03 ಜನವರಿ (ಹಿ.ಸ.) :
ಆ್ಯಂಕರ್ : ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಮಾಸ್ ನಡೆಸುತ್ತಿರುವ ಪೊಲೀಸ್ ಪಡೆಯ ಮೂವರು ಮಕ್ಕಳು ಮತ್ತು ಇಬ್ಬರು ಹಿರಿಯ ಅಧಿಕಾರಿಗಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ.
ಇಸ್ರೇಲಿ ಪಡೆಗಳು ದಕ್ಷಿಣ ಗಾಜಾದ ಅಲ್-ಮವಾಸಿಯ ಮೇಲೆ ಬಾಂಬ್ ದಾಳಿ ಮಾಡಿದ್ದು 18 ಪ್ಯಾಲೆಸ್ಟೀನಿಯನ್ನರು ಸಾವನಪ್ಪಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಹಮಾಸ್ ತನ್ನ ದೇಶದ ಮೇಲಿನ ದಾಳಿಯನ್ನು ನಿಲ್ಲಿಸದಿದ್ದರೆ ಮತ್ತು ಗಾಜಾದಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡದಿದ್ದರೆ, ಮತ್ತಷ್ಟು ದಾಳಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa