ಸಿಡ್ನಿ,3 ಜನವರಿ (ಹಿ.ಸ.) :
ಆ್ಯಂಕರ್ : ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಪಿ ಕ್ರಿಕೆಟ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದ ಮೊದಲನೆ ದಿನವಾದ ಇಂದು ಟಾಸ್ ಗೆದ್ದಿರುವ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.
ಇತ್ತೀಚಿನ ವರದಿ ಬಂದಾಗ ಭಾರತ ೩ ವಿಕೆಟ್ ನಷ್ಟಕ್ಕೆ ೫೩ ರನ್ ಗಳಿಸಿದೆ.
ಈ ಪಂದ್ಯದಿಂದ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಜಸ್ಪ್ರೀತ್ ಬ್ರೂಮ್ರಾ ತಂಡದ ನೇತೃತ್ವ ವಹಿಸಿದ್ದಾರೆ.
ಸರಣಿಯ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಆಸ್ಟ್ರೇಲಿಯಾ ಹಾಗೂ ಒಂದರಲ್ಲಿ ಭಾರತ ಗೆದ್ದಿದ್ದು, ಸರಣಿ ಸಮಬಲ ಸಾಧಿಸಲು ಭಾರತಕ್ಕೆ ಈ ಪಂದ್ಯ ನಿರ್ಣಾಯಕವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ