ಕೊಪ್ಪಳ,31 ಜನವರಿ (ಹಿ.ಸ.):
ಆ್ಯಂಕರ್ :ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಮತ್ತು ರಚಿತಾ ರಾಮ್ ಅಭಿನಯದ ಕಲ್ಟ್ ಚಿತ್ರದ ಚಿತ್ರೀಕರಣಕ್ಕೆ ಅನುಮತಿ ಪಡೆಯದೇ ಚಿತ್ರೀಕರಣಕ್ಕೆ ಮುಂದಾಗಿದ್ದಕ್ಕೆ ಸ್ಥಳಕ್ಕೆ
ಹಿರಿಯ ಅಧಿಕಾರಿಗಳು ಆಗಮಿಸಿ ತಡೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಆನೆಗೊಂದಿ, ರಾಮಾಪುರ, ಸಣಾಪೂರ ಗ್ರಾಮಗಳು ಸೇರಿದಂತೆ ತುಂಗಭದ್ರಾ ನದಿ ದಡದಲ್ಲಿ ಕಳೆದ 4 ದಿನಗಳಿಂದ ನಾನಾ ಕಡೆಗಳಲ್ಲಿ ಚಿತ್ರೀಕರಣ ನಡೆಸಿದೆ.ಚಿತ್ರೀಕರಣ ವೇಳೆ ಸಂರಕ್ಷಿತ ಪ್ರದೇಶ ಹಂಪಿಯ ತುಂಗಭದ್ರಾ ನದಿ ತೀರದಲ್ಲಿ ಬೆಂಕಿ ಹಾಕಿ ಚಿತ್ರೀಕರಣ ಮಾಡಲಾಗಿದೆ. ಆದರೆ ಚಿತ್ರತಂಡ ಸೂಕ್ತ ಅನುಮತಿಯನ್ನು ಪಡೆದಿರಲಿಲ್ಲವಾದ್ದರಿಂದ ಸರ್ಕಾರದ ಆದೇಶವನ್ನು ಉಲ್ಲೇಂಘಿಸಿದಕ್ಕೆ ಜಿಲ್ಲಾ ಕಂದಾಯ ,ಅರಣ್ಯ ಇಲಾಖೆ, ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಚಿತ್ರೀಕರಣ ಪ್ರದೇಶಕ್ಕೆ ಭೇಟಿ ನೀಡಿ ನೋಟಿಸ್ ನೀಡಿದೆ. ಇದರಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV