ಗ್ರಾಮೀಣ ಜನರಿಗೆ ಕೇಂದ್ರದಿಂದ ನಿರಂತರ ಆರ್ಥಿಕ ನೇರವು- ನಿರ್ಮಲಾ ಸೀತಾರಾಮನ್
ನವದೆಹಲಿ, 4 ಜನವರಿ (ಹಿ.ಸ.) : ಆ್ಯಂಕರ್ : ಗ್ರಾಮೀಣ ಜನರಿಗೆ ಗೌರವಯುತ ಜೀವನವನ್ನು ಒದಗಿಸುವ ಆದ್ಯತೆಯೊಂದಿಗೆ ಕೇಂದ್ರ ಸರ್ಕಾರವು ಗ್ರಾಮೀಣ ಭಾರತಕ್ಕೆ 2014 ರಿಂದ ನಿರಂತರವಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ನವದೆಹಲಿಯಲ್ಲಿ ನಡೆದ
Nirmala Sitharaman


ನವದೆಹಲಿ, 4 ಜನವರಿ (ಹಿ.ಸ.) :

ಆ್ಯಂಕರ್ :

ಗ್ರಾಮೀಣ ಜನರಿಗೆ ಗೌರವಯುತ ಜೀವನವನ್ನು ಒದಗಿಸುವ ಆದ್ಯತೆಯೊಂದಿಗೆ ಕೇಂದ್ರ ಸರ್ಕಾರವು ಗ್ರಾಮೀಣ ಭಾರತಕ್ಕೆ 2014 ರಿಂದ ನಿರಂತರವಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿಯಲ್ಲಿ ನಡೆದ ಗ್ರಾಮೀಣ ಭಾರತ ಮಹೋತ್ಸವ -೨೦೨೫ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ರೈತರು, ಬಡವರು ಮತ್ತು ಯುವ ಜನಾಂಗದ ಸಬಲೀಕರಣಕ್ಕೆ ಪೂರಕವಾಗಿವೆ.

ಗ್ರಾಮೀಣ ಮೂಲಸೌಕರ್ಯಗಳನ್ನು ಹೆಚ್ಚಿಸಲು, ಸ್ವಾವಲಂಬಿ ಆರ್ಥಿಕತೆಯನ್ನು ಸೃಷ್ಟಿಸಲು ಮತ್ತು ಗ್ರಾಮೀಣ ಸಮುದಾಯಗಳಲ್ಲಿ ನಾವೀನ್ಯತೆಯನ್ನು ಬೆಳೆಸುವ ಗುರಿಯನ್ನು ಮಹೋತ್ಸವ ಹೊಂದಿದೆ. ಮಹೋತ್ಸವದಲ್ಲಿ ರೋಮಾಂಚಕ ಪ್ರದರ್ಶನಗಳ ಮೂಲಕ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲಾಗುತ್ತಿದೆ. ಆರು ದಿನಗಳ ಕಾಲ ನಡೆಯುವ ಮಹೋತ್ಸವದ ಘೋಷ ವಾಕ್ಯ - ವಿಕಸಿತ ಭಾರತ- ೨೦೪೭ಕ್ಕಾಗಿ ಚೇತರಿಸಿಕೊಳ್ಳುವ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಎಂಬುದಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande