ನವದೆಹಲಿ, 4 ಜನವರಿ (ಹಿ.ಸ.) :
ಆ್ಯಂಕರ್ :ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಮೂಲಕ ಕಳೆದ ವರ್ಷ ಡಿಸೆಂಬರ್‌ನಲ್ಲಿ ಒಂದೇ ತಿಂಗಳಲ್ಲಿ ಸುಮಾರು 16.73 ಬಿಲಿಯನ್ ಹಣಕಾಸು ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು (ಎನ್‌ಪಿಸಿಐ) ಪತ್ರಿಕಾ ಪ್ರಕಟಣೆಯ ಮೂಲಕ ಹೇಳಿದೆ.
ಯುಪಿಐ ಸುಮಾರು 23.25 ಲಕ್ಷ ಕೋಟಿ ರೂಪಾಯಿಗಳನ್ನು ವಹಿವಾಟುಗಳಲ್ಲಿ ಪ್ರಕ್ರಿಯೆಗೊಳಿಸಿದೆ.
ವಹಿವಾಟುಗಳ ಎಣಿಕೆಯಲ್ಲಿ ವರ್ಷದಿಂದ ವರ್ಷಕ್ಕೆ 39 ಪ್ರತಿಶತ ಮತ್ತು ವಹಿವಾಟಿನ ಮೊತ್ತದಲ್ಲಿ ವರ್ಷದಿಂದ ವರ್ಷಕ್ಕೆ 28 ಪ್ರತಿಶತದಷ್ಟು ಬೆಳವಣಿಗೆ ಕಂಡುಬಂದಿದೆ ಎಂದು ಎನ್‌ಪಿಸಿಐ ಹೇಳಿದೆ.
ಕಳೆದ ತಿಂಗಳು ಸರಾಸರಿ ದೈನಂದಿನ ವಹಿವಾಟಿನ ಮೊತ್ತ 74 ಸಾವಿರದ 990 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ