ಇಸ್ಲಾಮಾಬಾದ್, 05 ಜನವರಿ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನದ ಬಲೂಚಿಸ್ತಾನದ ಟರ್ಬತ್ ನಗರದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿ, ೩೨ ಜನ ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬದ ಆರು ಮಂದಿ ಸೇರಿದ್ದಾರೆ.
ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಜಿಯೋ ನ್ಯೂಸ್ ಚಾನೆಲ್‌ನ ಸುದ್ದಿ ಪ್ರಕಾರ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳಲ್ಲಿ ಚಲಿಸುತ್ತಿದ್ದ ಪ್ರಯಾಣಿಕ ಬಸ್ ಹಠಾತ್ ಸ್ಫೋಟದ ನಂತರ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಮೃತರನ್ನು ನೂರ್ ಖಾನ್, ಅಬ್ದುಲ್ ವಹಾಬ್, ಇಜಾಜ್ ಮತ್ತು ಲಿಯಾಕತ್ ಅಲಿ ಎಂದು ಗುರುತಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa