ಛತ್ತೀಸ್‌ಗಢ:ಸ್ಫೋಟದಲ್ಲಿ ಯೋಧರ ಸಾವು: ಅಮಿತ್ ಶಾ ಸಂತಾಪ
ನವದೆಹಲಿ, 6 ಜನವರಿ (ಹಿ.ಸ.) : ಆ್ಯಂಕರ್ :ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಂದು ಸೇನಾ ವಾಹನವನ್ನು ಐಇಡಿಯಿಂದ ಸ್ಫೋಟಿಸಿದ್ದಾರೆ . ಈ ಸ್ಫೋಟದಲ್ಲಿ ಜಿಲ್ಲಾ ಮೀಸಲು ಗಾರ್ಡ್‌ಗಳ (ಡಿಆರ್‌ಜಿ) ಎಂಟು ಮಂದಿ ಯೋಧರು ಹಾಗೂ ಚಾಲಕ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ
:


ನವದೆಹಲಿ, 6 ಜನವರಿ (ಹಿ.ಸ.) :

ಆ್ಯಂಕರ್ :ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಂದು ಸೇನಾ ವಾಹನವನ್ನು ಐಇಡಿಯಿಂದ ಸ್ಫೋಟಿಸಿದ್ದಾರೆ . ಈ ಸ್ಫೋಟದಲ್ಲಿ ಜಿಲ್ಲಾ ಮೀಸಲು ಗಾರ್ಡ್‌ಗಳ (ಡಿಆರ್‌ಜಿ) ಎಂಟು ಮಂದಿ ಯೋಧರು ಹಾಗೂ ಚಾಲಕ ಸಾವನ್ನಪ್ಪಿದ್ದಾರೆ.

ಈ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಗೃಹ ಸಚಿವ ಅಮಿತ್ ಶಾಅವರು ಸೈನಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಸೈನಿಕರ ಬಲಿದಾನ ವ್ಯರ್ಥವಾಗುವುದಿಲ್ಲ ಮತ್ತು ಮಾರ್ಚ್ 2026 ರ ವೇಳೆಗೆ ನಕ್ಸಲಿಸಂ ಅನ್ನು ಭಾರತದಿಂದ ಕಿತ್ತೊಗೆಯಲಾಗುವುದು ಎಂದು ಅವರು ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande