ನವದೆಹಲಿ, 6 ಜನವರಿ (ಹಿ.ಸ.) :
ಆ್ಯಂಕರ್ :ನವದೆಹಲಿಯಲ್ಲಿಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮತ್ತು ಅಮೇರಿಕಾದ ಸಹವರ್ತಿ ವಿಶೇಷ ಅಧಿಕಾರಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಸಭೆ ನಡೆಸಿದರು.
ಸಭೆಯಲ್ಲಿ ಪ್ರಾದೇಶಿಕ ಮತ್ತು ಜಾಗತಿಕ ಸಹಕಾರ ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತಂತೆ ಚರ್ಚಿಸಲಾಗಿದೆ.
ಈ ಕುರಿತಂತೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಡಾ. ಎಸ್. ಜೈಶಂಕರ್ ಭಾರತ-ಅಮೆರಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಜೇಕ್ ಸುಲ್ಲಿವನ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಜೇಕ್ ಸುಲ್ಲಿವನ್ ನವದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವಲ್ ಅವರನ್ನು ಭೇಟಿಯಾಗಲಿದ್ದಾರೆ. ಸಭೆಯಲ್ಲಿ ನಿರ್ಣಾಯಕ ಹಾಗೂ ಉದಯೋನ್ಮುಖ ತಂತ್ರಜ್ಞಾನ ಮತ್ತು ಇನ್ನಿತರ ದ್ವಿಪಕ್ಷೀಯ ಸಮಸ್ಯೆಗಳ ಕುರಿತು ವ್ಯಾಪಕ ಚರ್ಚೆ ನಡೆಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ