ಬೆಂಗಳೂರು ಪ್ರಯಾಗ್ ರಾಜ್ ನಡುವೆ ವಿಶೇಷ ವೇಗದೂತ ರೈಲು
ಬೆಂಗಳೂರು, 06 ಜನವರಿ (ಹಿ.ಸ.) : ಆ್ಯಂಕರ್ : ಕುಂಭಮೇಳ 2025 ರ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್ಎಂವಿಬಿ) ಮತ್ತು ಪ್ರಯಾಗ್ ರಾಜ್ ನಿಲ್ದಾಣಗಳ ನಡುವೆ ಏಕಮಾರ್ಗ ಕುಂಭ ಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು (ರ
Train


ಬೆಂಗಳೂರು, 06 ಜನವರಿ (ಹಿ.ಸ.) :

ಆ್ಯಂಕರ್ : ಕುಂಭಮೇಳ 2025 ರ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್ಎಂವಿಬಿ) ಮತ್ತು ಪ್ರಯಾಗ್ ರಾಜ್ ನಿಲ್ದಾಣಗಳ ನಡುವೆ ಏಕಮಾರ್ಗ ಕುಂಭ ಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 06577) ಓಡಿಸಲಿದೆ.

ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರು-ಪ್ರಯಾಗ್ ರಾಜ್ ಏಕಮಾರ್ಗ ಕುಂಭಮೇಳ ವಿಶೇಷ ಎಕ್ಸ್ ಪ್ರೆಸ್ ರೈಲು ಬುಧವಾರ 23:50 ಗಂಟೆಗೆ (ಜನವರಿ 8, 2025) ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಶುಕ್ರವಾರ 17:15 ಗಂಟೆಗೆ (ಜನವರಿ 10, 2025) ಪ್ರಯಾಗ್ ರಾಜ್ ತಲುಪಲಿದೆ.

ಈ ರೈಲು ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ, ಪೆರಂಬೂರು, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರ್ಷಾ, ಚಂದ್ರಾಪುರ, ಸೇವಾಗ್ರಾಮ್, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 14 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 4 ಸ್ಲೀಪರ್ ಬೋಗಿಗಳು ಮತ್ತು 2 ಲಗೇಜ್ ಕಂ ಬ್ರೇಕ್ ವ್ಯಾನ್ ಗಳು ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈಋತ್ಯ ರೇಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande