ಬಳ್ಳಾರಿ, 06 ಜನವರಿ (ಹಿ.ಸ.) :
ಆ್ಯಂಕರ್ : ಕೃಷಿಗೆ ಪೂರಕವಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೇವಾಲ ಅವರ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘದ ಬಳ್ಳಾರಿ ಜಿಲ್ಲಾ ಘಟಕವು ಬಿಮ್ಸ್ ಆವರಣದ ಮುಂಭಾಗದಲ್ಲಿರುವ ಮಹಾತ್ಮಾಗಾಂಧಿ ಪ್ರತಿಮೆಯ ಬಳಿ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ.
ಕನಿಷ್ಠ ಬೆಂಬಲ ಬೆಲೆ ನೀತಿಯ ಅನುಷ್ಠಾನಕ್ಕೆ ತುರ್ತು ಮಧ್ಯಸ್ಥಿಕೆ ವಹಿಸಲು ಪ್ರಧಾನ ಮಂತ್ರಿಗಳು, ಒಕ್ಕೂಟ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರವನ್ನು ಬರೆಯಲು ಕೋರಿ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಜಿಲ್ಲಾಡಳಿತದ ಪರವಾಗಿ ಅಪರ ಜಿಲ್ಲಾಧಿಕಾರಿಗಳಾದ ಮಹಮ್ಮದ್ ಝುಬೇರ್ ಅವರು ಮನವಿ ಸ್ವೀಕರಿಸಿದರು. ರೈತ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್