ಜೆರುಸಲೆಮ್, 07 ಜನವರಿ (ಹಿ.ಸ.) :
ಆ್ಯಂಕರ್ : ಇಸ್ರೇಲಿ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಕಳೆದ ರಾತ್ರಿ ಇಸ್ರೇಲಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಪ್ಯಾಲೆಸ್ತೀನ್‌ನ ಅಲ್-ಫಂಡುಕ್ ಗ್ರಾಮದಲ್ಲಿ ಈ ದಾಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಗುರುತು ಪತ್ತೆಯಾಗಿಲ್ಲ.
ದಾಳಿಯನ್ನು ಖಂಡಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. ದಾಳಿ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa