ಕೊಪ್ಪಳ, 07 ಜನವರಿ (ಹಿ.ಸ.) :
ಆ್ಯಂಕರ್ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಮುಧೋಳ ಗ್ರಾಮದ ನಜೀರ್‌ಸಾಬ ಮೋಟೆಖಾನನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.
2019ರ ಮಾರ್ಚ್ 1 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಧೋಳ ಗ್ರಾಮದ ನಿವಾಸಿ ನಜೀರಸಾಬ ಮೋಟೆಖಾನ ಇತನು ಅದೇ ಗ್ರಾಮದ ಬಾಧಿತಳು ಅಪ್ರಾಪ್ತಳು ಎಂದು ಗೊತ್ತಿದ್ದರೂ ಅವಳಿಗೆ ಪುಸಲಾಯಿಸಿ ಅಪಹರಿಸಿ ಕೊಪ್ಪಳಕ್ಕೆ ಕರೆದುಕೊಂಡು ಬಂದು ಕುವೆಂಪು ನಗರದಲ್ಲಿರುವ 500 ಪ್ಲಾಟ ನಿವಾಸಿ ಯಂಕಪ್ಪ ಕಟ್ಟಿಮನಿ ಇವರ ಜನತಾ ಮನೆಯಲ್ಲಿ ಬಾಧಿತಳಿಗೆ ಬಲಾತ್ಕಾರ ಮಾಡಿರುತ್ತಾನೆ ಹಾಗೂ ಮಾರ್ಚ್ 1 ರಿಂದ 6 ರವರೆಗೆ ಬಾಧಿತಳನ್ನು ತನ್ನ ಮನೆಯಲ್ಲಿಟ್ಟುಕೊಂಡು 6 ರಿಂದ 7 ಸಲ ಬಲಾತ್ಕಾರ ಮಾಡಿರುವ ಆರೋಪವು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದ್ದರಿAದ ಯಲಬುರ್ಗಾ ಪೋಲಿಸ್ ಠಾಣೆಯ ಪಿಎಸ್‌ಐ ಬಸವರಾಜ ಇವರು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ರಮೇಶರೊಟ್ಟಿ ಸಿಪಿಐ ಯಲಬುರ್ಗಾ ಇವರು ನಿರ್ವಹಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೊ) ಸಂ: 19/2019ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿ ನಜೀರ್‌ಸಾಬ ಮೋಟೆಖಾನ ಇತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 40,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಶ್ರೀ ಕುಮಾರ ಡಿ.ಕೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು (ಪೋಕ್ಸೊ) ಕೊಪ್ಪಳ ಇವರು 2024ರ ಡಿಸೆಂಬರ್ 31 ರಂದು ತೀರ್ಪು ಹೊರಡಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮದೇಸಾಯಿ ಅವರು ಪ್ರಕರಣ ನಡೆಸಿ, ವಾದ ಮಂಡಿಸಿದ್ದರು. ಯಲಬುರ್ಗಾ ಪೊಲೀಸ್ ಠಾಣೆಯ ಸಿಬ್ಬಂದಿ ವಿಜಯಲಕ್ಷಿ ಹೆಚ್.ಸಿ-57 ಇವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್