ಎಚ್‌ಎಂಪಿವಿ ಪರಿಸ್ಥಿತಿ ಅವಲೋಕನಕ್ಕೆ ಕೇಂದ್ರ ಆರೋಗ್ಯ ಸಭೆ
ಎಚ್‌ಎಂಪಿವಿ ಪರಿಸ್ಥಿತಿ ಅವಲೋಕನಕ್ಕೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಭೆ
ಪೈಲ್


ನವದೆಹಲಿ, 7 ಜನವರಿ (ಹಿ.ಸ.) :

ಆ್ಯಂಕರ್ :ಹ್ಯೂಮನ್ ಮೆಟಾನ್ಯೂಮೋ ವೈರಸ್ - ಎಚ್‌ಎಂಪಿವಿಯಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಹೇಳಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತದಲ್ಲಿ ಉಸಿರಾಟದ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು ಹ್ಯೂಮನ್ ಮೆಟಾನ್ಯೂಮೋ ವೈರಸ್ ಪ್ರಕರಣಗಳ ಸ್ಥಿತಿ ಮತ್ತು ಅವುಗಳ ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ಇಂದು ಸಹ ವಿಶೇಷ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವರ್ಚುವಲ್ ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗಿನ ಆರೋಗ್ಯ ಕಾರ್ಯದರ್ಶಿ,ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದು, ಅವರಿಂದ ಸಮಗ್ರ ಮಾಹಿತಿಯನ್ನು ಪಡೆಯಲಾಗಿದೆ.

ಇನ್ಫ್ಲುಯೆನ್ಸ ತರಹದ ಅನಾರೋಗ್ಯ- ಐಎಲ್‌ಐ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ -ಎಸ್‌ಎಆರ್‌ಐ ಕಣ್ಗಾವಲು ಬಲಪಡಿಸಲು ಮತ್ತು ಪರಿಶೀಲಿಸಲು ಇದೇ ವೇಳೆ ಅವರು ರಾಜ್ಯಗಳಿಗೆ ಸಲಹೆ ನೀಡಿದರು.

ಚಳಿಗಾಲದಲ್ಲಿ ಉಸಿರಾಟದ ಕಾಯಿಲೆಗಳಲ್ಲಿ ಹೆಚ್ಚಳ ಕಂಡುಬರುವುದು ಸಾಮಾನ್ಯ. ಉಸಿರಾಟದ ಕಾಯಿಲೆಯ ಪ್ರಕರಣಗಳ ಯಾವುದೇ ಸಂಭಾವ್ಯ ಉಲ್ಬಣದ ನಿರ್ವಹಣೆಗೆ ದೇಶ ಸನ್ನದ್ಧವಾಗಿದೆ ಎಂದು ತಿಳಿಸಿದೆ.

ಸಭೆಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ- ಐಇಸಿ ಮತ್ತು ವೈರಸ್ ಹರಡುವುದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ. ಏತನ್ಮಧ್ಯೆ, ಮಹಾರಾಷ್ಟ್ರದಲ್ಲೂ ಎರಡು ಎಚ್‌ಎಂಪಿವಿ ಪ್ರಕರಣಗಳು ಕಂಡು ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande