ಮುಂಬಯಿ, 07 ಜನವರಿ (ಹಿ.ಸ.) :
ಆ್ಯಂಕರ್ : ಬಾಲಿವುಡ್ ಬೆಡಗಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಜೀವ ತುಂಬಿದ್ದಾರೆ. ಈ ಚಿತ್ರದ 2ನೇ ಟ್ರೈಲರ್ ಇದಾಗಿದ್ದು, ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. 1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದೆ.
ರಾಜಕೀಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ಇಂದಿರಾ ಗಾಂಧಿ ಅವರು ಎದುರಿಸಿದ ರೀತಿಯನ್ನು ಟ್ರೈಲರ್ ಮೂಲಕ ಝಲಕ್ ತೋರಿಸಲಾಗಿದೆ. ಕಂಗನಾ ಜೊತೆ ಶ್ರೇಯಸ್ ತಲ್ಪಡೆ, ಅನುಪಮ್ ಖೇರ್, ಮಹಿಮಾ ಚೌದರಿ, ಸತೀಶ್ ಕೌಶಿಕ್, ಮಿಲಿಂದ್ ಸೋಮನ್ ಮುಂತಾದವರು ನಟಿಸಿದ್ದಾರೆ. ಜನವರಿ 17ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ನಟನೆಯ ಜೊತೆ ನಿರ್ದೇಶಕಿ, ನಿರ್ಮಾಪಕಿಯಾಗಿ ಅವರು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa