ನವದೆಹಲಿ, 7 ಜನವರಿ (ಹಿ.ಸ.) :
ಆ್ಯಂಕರ್ :ದೆಹಲಿಯಲ್ಲಿ ಫೆ.5 ರಂದು ವಿಧಾನಸಭೆಯ ಚುನಾವಣೆ ನಡೆಯಲಿದ್ದರೆ ಫೆ.8 ರಂದು ಮತ ಎಣಿಕೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆ 2025ರ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದರು.
ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ .ಅಧಿಸೂಚನೆಯನ್ನು ಜನವರಿ 10 ರಂದು ಹೊರಡಿಸಲಾಗುವುದು ಮತ್ತು ನಾಮನಿರ್ದೇಶನದ ಕೊನೆಯ ದಿನಾಂಕ ಈ ತಿಂಗಳ 17 ಆಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಒಂದು ಕೋಟಿ 55 ಲಕ್ಷ ಮತದಾರರಿಗೆ 13 ಸಾವಿರದ 33 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. ಈ ಬಾರಿ ದೆಹಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ