ಸೈಕಿಯಾ ಮತ್ತು ಭಾಟಿಯಾ ಬಿಸಿಸಿಐ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಅವಿರೋಧ ಆಯ್ಕೆ ಖಚಿತ
ಮುಂಬಯಿ, 08 ಜನವರಿ (ಹಿ.ಸ.) : ಆ್ಯಂಕರ್ : ದೇವ್‌ಜಿತ್ ಸೈಕಿಯಾ ಮತ್ತು ಪ್ರಭತೇಜ್ ಸಿಂಗ್ ಭಾಟಿಯಾ ಅವರು ಜನವರಿ 12 ರಂದು ಬಿಸಿಸಿಐ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಅವಿರೋಧ ಆಯ್ಕೆ ಖಚಿತವಾಗಿದೆ. ಡಿಸೆಂಬರ್ ೧ ರಂದು ಜಯ್ ಶಾ ಐಸಿಸಿ ಅಧ್ಯಕ್ಷರಾದ ನಂತರ ಸೈಕಿಯಾ ಬಿಸಿಸಿಐನ ಹಂಗಾಮಿ ಕಾರ್ಯದರ್ಶಿಯಾಗಿ ಕಾರ
Bcci


ಮುಂಬಯಿ, 08 ಜನವರಿ (ಹಿ.ಸ.) :

ಆ್ಯಂಕರ್ : ದೇವ್‌ಜಿತ್ ಸೈಕಿಯಾ ಮತ್ತು ಪ್ರಭತೇಜ್ ಸಿಂಗ್ ಭಾಟಿಯಾ ಅವರು ಜನವರಿ 12 ರಂದು ಬಿಸಿಸಿಐ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಅವಿರೋಧ ಆಯ್ಕೆ ಖಚಿತವಾಗಿದೆ.

ಡಿಸೆಂಬರ್ ೧ ರಂದು ಜಯ್ ಶಾ ಐಸಿಸಿ ಅಧ್ಯಕ್ಷರಾದ ನಂತರ ಸೈಕಿಯಾ ಬಿಸಿಸಿಐನ ಹಂಗಾಮಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆಶಿಶ್ ಶೆಲಾರ್ ಅವರ ಕಾರಣದಿಂದ ತೆರವಾದ ಖಜಾಂಚಿ ಹುದ್ದೆಗೆ ಭಾಟಿಯಾ ಅವರು ನಾಮಪತ್ರ ಸಲ್ಲಿಸಿದ್ದರು. ಈ ಎರಡು ಸ್ಥಾನಗಳಿಗೆ ಕೇವಲ ಇಬ್ಬರೆ ನಾಮಪತ್ರ ಸಲ್ಲಿಸಿದ್ದಾರೆ ಹೀಗಾಗಿ ಇವರ ಅವಿರೋಧ ಆಯ್ಕೆ ಖಚಿತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande