ಗೌರವಧನ ಹೆಚ್ಚಳ  :  ಮುಖ್ಯಮಂತ್ರಿಗಳ ಜೊತೆ ಚರ್ಚೆ - ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, 08 ಜನವರಿ (ಹಿ.ಸ.) : ಆ್ಯಂಕರ್ : ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನ
Dinesh


ಬೆಂಗಳೂರು, 08 ಜನವರಿ (ಹಿ.ಸ.) :

ಆ್ಯಂಕರ್ : ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವರು, ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು.

15 ಸಾವಿರ ವೇತನ ನಿಗದಿ ಮಾಡುವಂತೆ ಆಶಾ ಕಾರ್ಯಕರ್ತೆಯರು ಈ ವೇಳೆ ಸಚಿವರಿಗೆ ಒತ್ತಾಯಿಸಿದರು. ಈ ಕುರಿತಂತೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 8 ಸಾವಿರ ಗೌರವಧನ ಖಚಿತವಾಗಿ ಸಿಗುತ್ತಿದೆ. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರ್ಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನ ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ ಎಂದರು. ಅಲ್ಲದೇ ಮುಂಬರುವ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande