ಹಮಾಸ್‌ ಉಗ್ರರಿಗೆ ಡೊನಾಲ್ಡ್‌ ಟ್ರಂಪ್ ಎಚ್ಚರಿಕೆ 
ವಾಷಿಂಗ್ಟನ್, 08 ಜನವರಿ (ಹಿ.ಸ.) : ಆ್ಯಂಕರ್ : ಹೊಸದಾಗಿ ಚುನಾಯಿತರಾದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌‌ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಪ್ರಮಾಣ ವಚನಕ್ಕೆ ಮುನ್ನ ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಮಧ್ಯಪ್ರಾಚ್ಯದಲ್ಲಿ ಎಲ್ಲವು ನ
Trump


ವಾಷಿಂಗ್ಟನ್, 08 ಜನವರಿ (ಹಿ.ಸ.) :

ಆ್ಯಂಕರ್ : ಹೊಸದಾಗಿ ಚುನಾಯಿತರಾದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌‌ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಪ್ರಮಾಣ ವಚನಕ್ಕೆ ಮುನ್ನ ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಮಧ್ಯಪ್ರಾಚ್ಯದಲ್ಲಿ ಎಲ್ಲವು ನಾಶವಾಗಲಿದೆ ಎಂದು ಎಚ್ಚರಿಸಿದ್ದಾರೆ. ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಮಾತನಾಡಿರುವ ಅವರು ತಾವು ಅಧಿಕಾರ ವಹಿಸಿಕೊಳ್ಳುವ ಮುನ್ನ ಹಮಾಸ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದಲ್ಲಿ ಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ 7, 2023 ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ಭಯೋತ್ಪಾದಕರು ನಡೆಸಿದ ದಾಳಿಯ ನಂತರ, ಇಸ್ರೇಲ್‌ನ ಅಂದಾಜು ನೂರಕ್ಕೂ ಹೆಚ್ಚು ಜನರನ್ನು ಇನ್ನೂ ಹಮಾಸ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande