ಧಾರವಾಡ, 08 ಜನವರಿ (ಹಿ.ಸ.) :
ಆ್ಯಂಕರ್ : ಕೇಂದ್ರದ ಗೃಹ ಸಚಿವ ಅಮಿತ ಶಾ ಅವರ ಹೇಳಿಕೆಯನ್ನ ಖಂಡಿಸಿ ವಿವಿಧ ದಲಿತ ಸಂಘಟನೆಗಳು ನಾಳೆ ಹುಬ್ಬಳ್ಳಿ-ಧಾರವಾಡ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಹೊರಡಿಸಿದ್ದಾರೆ.
ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಬಂದ್ ಹಿನ್ನೆಲೆಯಲ್ಲಿ ರಜೆ ಘೋಷಣೆಯಾಗಿದ್ದರಿಂದ ಮುಂದಿನ ಎರಡು ಶನಿವಾರ ಪೂರ್ಣವಾಗಿ ಶಾಲೆಗಳನ್ನ ನಡೆಸುವಂತೆಯೂ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa