ನವದೆಹಲಿ, 8 ಜನವರಿ (ಹಿ.ಸ.) :
ಆ್ಯಂಕರ್ :ಮಾಲ್ಡೀವ್ಸ್ ಸಚಿವ ಮೊಹಮ್ಮದ್ ಘಾಸನ್ ಮೌಮೂನ್ ಇಂದಿನಿಂದ ಭಾರತಕ್ಕೆ ಮೂರು ದಿನಗಳ ಭೇಟಿ ನೀಡಲಿದ್ದಾರೆ.
ಈ ಭೇಟಿ ಸಂದರ್ಭದಲ್ಲಿ ಗೋವಾ ಮತ್ತು ಮುಂಬೈಗೆ ಭೇಟಿ ನೀಡಲಿದ್ದಾರೆ.
ಇಂದು ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಲ್ಡೀವ್ಸ್ ಸಹವರ್ತಿ , ಮಾಲ್ಡೀವ್ಸ್ ಸಚಿವ ಮೊಹಮ್ಮದ್ ಘಾಸನ್ ಮೌಮೂನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ಈ ಮಾತುಕತೆಯ ಸಮಯದಲ್ಲಿ, ಉಭಯ ನಾಯಕರು ತರಬೇತಿ, ನಿಯಮಿತ ಸೇನಾ ಸಮರಾಭ್ಯಾಸ, ಸೇನಾ ಕಾರ್ಯಚರಣೆ, ಮತ್ತು ರಕ್ಷಣಾ ಯೋಜನೆಗಳು ಸೇರಿದಂತೆ ದ್ವಿಪಕ್ಷೀಯ ರಕ್ಷಣಾ ಸಹಕಾರದ ನಾನಾ ಅಂಶಗಳನ್ನು ಪರಿಶೀಲಿಸಲಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ