ನವದೆಹಲಿ, 8 ಜನವರಿ (ಹಿ.ಸ.) :
ಆ್ಯಂಕರ್ :
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಕೆಲವೇ ದಿನಗಳಲ್ಲಿ ಇಡೀ ರಾಷ್ಟ್ರವೇ ಶೋಕದಲ್ಲಿ ಮುಳುಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ವಿಯೆಟ್ನಾಂಗೆ ತೆರಳಿದೆಕ್ಕೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ಪ್ರಶ್ನಿಸಿದ್ದಾರೆ.
ಅವರು ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ತಂದೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಮಾರಕವನ್ನು ರಾಜ್ ಘಾಟ್ ನ 'ರಾಷ್ಟ್ರೀಯ ಸ್ಮೃತಿ'ಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಳೆದ ದಿನ
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ತಮ್ಮ ತಂದೆಗೆ ಗೌರವ ಸಲ್ಲಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದೇನೆ ಎಂದರು.
ಪ್ರಣಬ್ ಮುಖರ್ಜಿ ಅವರ ಸ್ಮಾರಕವನ್ನು ಸ್ಥಾಪಿಸುವ ನಿರ್ಧಾರದ ಬಗ್ಗೆ ಕೇಂದ್ರವು ಕೊಳಕು ರಾಜಕೀಯ ದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಲಾಗಿತ್ತು. ಆದರೆ ಕೇಂದ್ರ ಸರಕಾರವು ಯಾವುದೇ ರೀತಿ ರಾಜಕೀಯ ಮಾಡುತ್ತಿಲ್ಲ, ಅಭಿವೃದ್ಧಿ ಕಡೆ ಗಮನ ಹರಿಸಲಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವು ವಿನಾಕಾರಣ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.
“ದೇಶದ ಒಬ್ಬ ಸಾಮಾನ್ಯ, ಕಾಳಜಿಯುಳ್ಳ ನಾಗರಿಕನಾಗಿ, ನಾನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಪ್ರಶ್ನಿಸಲು ಬಯಸುತ್ತೇನೆ. ರಾಷ್ಟ್ರವು ತಮ್ಮದೇ ಪಕ್ಷದ ಧೀಮಂತರಾಗಿದ್ದ ಮಾಜಿ ಪ್ರಧಾನಿಯ ಸಾವಿನಿಂದ ಶೋಕಿಸುತ್ತಿರುವಾಗ, ನೀವು ಹೊಸ ವರ್ಷವನ್ನು ಆಚರಿಸಲು ವಿದೇಶ್ ಪ್ರವಾಸಕ್ಕೆ ಏಕೆ ಹೋಗಿದ್ದೀರಿ ಎಂದು ಪ್ರಶ್ನಿಸಿದರು.
---------------
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ