ಗೋವಾದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ  ನಟ ಯಶ್  
ಪಣಜಿ, 8 ಜನವರಿ (ಹಿ.ಸ.) : ಆ್ಯಂಕರ್ : ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಯಶ್‌ ಅವರಿಗೆ ಇಂದು ಹುಟ್ಟು ಹಬ್ಬದ ದಿನ. ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ಯಶ್‌ ತಿಳಿಸಿದ್ದರು. ಆದರೆ ಪತ್ನಿ ರಾಧಿಕಾ ಹಾಗೂ ಆಪ್ತರೊಂದಿಗೆ ಗೋವಾದಲ್ಲಿ
ಇದೀಗ ‘ಟಾಕ್ಸಿಕ್‌’ ನೋಟದಿಂದ ಅಭಿಮಾನಿಗಳಿಗೆ  ಆಶ್ಚರ್ಯವನ್ನುಂಟು ಮಾಡಿದ್ದಾರೆ.


ಪಣಜಿ, 8 ಜನವರಿ (ಹಿ.ಸ.) :

ಆ್ಯಂಕರ್ : ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಯಶ್‌ ಅವರಿಗೆ ಇಂದು ಹುಟ್ಟು ಹಬ್ಬದ ದಿನ. ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ಯಶ್‌ ತಿಳಿಸಿದ್ದರು. ಆದರೆ ಪತ್ನಿ ರಾಧಿಕಾ ಹಾಗೂ ಆಪ್ತರೊಂದಿಗೆ ಗೋವಾದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದರ ಜೊತೆಗ ಇದೀಗ ‘ಟಾಕ್ಸಿಕ್‌’ ನೋಟದಿಂದ ಅಭಿಮಾನಿಗಳಿಗೆ ಆಶ್ಚರ್ಯವನ್ನುಂಟು ಮಾಡಿದ್ದಾರೆ.

ಗೋವಾದಲ್ಲಿ ಮಧ್ಯರಾತ್ರಿ ನಟ ಯಶ್‌ ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಕೇಕ್‌ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಕೊಂಡರು. ಈ ಸಂದರ್ಭದಲ್ಲಿ ನಟನ ಆಪ್ತ ಪಾನಿ ಪುರಿ ಕಿಟ್ಟಿ, ಕೆ ವಿ ಎನ್ ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande