ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯ: ಡಿ.ಕೆ. ಶಿವಕುಮಾರ್
ಕುಂಭಕೋಣಂ, 9 ಜನವರಿ (ಹಿ.ಸ.) : ಆ್ಯಂಕರ್ : ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ತ
ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್


ಕುಂಭಕೋಣಂ, 9 ಜನವರಿ (ಹಿ.ಸ.) :

ಆ್ಯಂಕರ್ :

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ತಮಿಳುನಾಡಿನ ಕುಂಬಕೋಣಂ ನಲ್ಲಿನ

ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ ದರ್ಶನ ಪಡೆದ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೇಳಿದಾಗ, ಬಿಜೆಪಿ ಸರ್ಕಾರ ಇಲ್ಲದ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ನಾವು ನೀಡುವ ತೆರಿಗೆಗೆ ತಕ್ಕನಾಗಿ ನಮಗೆ ಅನುದಾನ ಬರುತ್ತಿಲ್ಲ. ಈ ವಿಚಾರದಲ್ಲಿ ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಬೇಕಿದೆ ಎಂದು ಉತ್ತರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande