ಮಾನವ ಹಕ್ಕುಗಳ ಆಯೋಗ ಭೇಟಿ, ಪರಿಶೀಲನೆ
ಬಳ್ಳಾರಿ, 09 ಜನವರಿ (ಹಿ.ಸ.) : ಆ್ಯಂಕರ್ :ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಂಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ. ವಂಟಿಗೋಡಿ ಅವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯ 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆ, ಜಿಲ್ಲಾ ಕೇಂದ್ರ ಕಾರಾಗೃಹ, ಬಿಮ್ಸ್ ಆಸ್ಪತ್ರೆ, ಸರ್ಕ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ವಿವಿಧೆಡೆ ಭೇಟಿ, ಪರಿಶೀಲನೆ


ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ವಿವಿಧೆಡೆ ಭೇಟಿ, ಪರಿಶೀಲನೆ


ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ವಿವಿಧೆಡೆ ಭೇಟಿ, ಪರಿಶೀಲನೆ


ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ವಿವಿಧೆಡೆ ಭೇಟಿ, ಪರಿಶೀಲನೆ


ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ವಿವಿಧೆಡೆ ಭೇಟಿ, ಪರಿಶೀಲನೆ


ಬಳ್ಳಾರಿ, 09 ಜನವರಿ (ಹಿ.ಸ.) :

ಆ್ಯಂಕರ್ :ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಂಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ. ವಂಟಿಗೋಡಿ ಅವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯ 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆ, ಜಿಲ್ಲಾ ಕೇಂದ್ರ ಕಾರಾಗೃಹ, ಬಿಮ್ಸ್ ಆಸ್ಪತ್ರೆ, ಸರ್ಕಾರಿ ಬುದ್ಧಿಮಾಂದ್ಯ ಬಾಲಕರ ಬಾಲಮಂದಿರ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಆಸ್ಪತ್ರೆ ಆವರಣದ 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆಗೆ ಭೇಟಿ ನೀಡಿ, ಒಬಿಜಿ ವಾರ್ಡ್, ಪ್ರಸೂತಿ ವಿಭಾಗದಲ್ಲಿದ್ದ ಬಾಣಂತಿಯರು, ಬಾಣಂತಿಯರ ಆರೋಗ್ಯ ವಿಚಾರಿಸಿದರು. ವೈದ್ಯರು ಸಮಯಕ್ಕೆ ಸರಿಯಾಗಿ ಬರುತ್ತಾರೆಯೇ? ಆರೋಗ್ಯ ಸೇವೆ ಒದಗಿಸುವಲ್ಲಿ ವಿಳಂಬ ತೋರುತ್ತಿದ್ದಾರೆಯೇ? ಕೇಳಿ ತಿಳಿದುಕೊಂಡರು.

ಹೆರಿಗೆ ಕೋಣೆಗೆ ಭೇಟಿದ ಆಯೋಗದ ತಂಡ, ಹೆರಿಗೆ ವಾರ್ಡ್‍ಗಳಲ್ಲಿ ಸ್ವಚ್ಛತೆ ಆದ್ಯತೆ ನೀಡುವಂತೆ ಆಸ್ಪತ್ರೆಯ ಸಿಬ್ಬಂದಿಗೆ ಸೂಚಿಸಿದರು. ಔಷಧಿ ವಿತರಣಾ ವಿಭಾಗಕ್ಕೆ ಭೇಟಿ ನೀಡಿ, ಅವಧಿ ಮೀರಿದ ಔಷಧಿಗಳನ್ನು ವಿತರಿಸುವಂತಿಲ್ಲ ಎಂದು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕೇಂದ್ರ ಕಾರಾಗೃಹ:

ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ವ್ಯವಸ್ಥೆಯ ಪರಿಶೀಲನೆ ನಡೆಸಿದ ತಂಡ, ಜೈಲಿನಲ್ಲಿರುವ ವಿಚಾರಾಣಾಧೀನ ಕೈದಿಗಳ ಮೂಲಭೂತ ಹಕ್ಕುಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾರಾಗೃಹದಲ್ಲಿನ ಅಡುಗೆ ಕೋಣೆ ಸೇರಿದಂತೆ ಹಲವೆಡೆ ಭೇಟಿ ನೀಡಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ವಿಚಾರಣಾದೀನಾ ಕೈದಿಗಳಿಗೆ ನೀಡುವ ಉಪಹಾರ, ಊಟ, ಕುಡಿಯುವ ನೀರಿನ ಗುಣಮಟ್ಟದ ಕುರಿತು ಚರ್ಚಿಸಿದ ಅವರು, ವೇಳಾಪಟ್ಟಿಯಂತೆ ಆಹಾರ ವಿತರಣೆ ಮಾಡಲಾಗುತ್ತಿದೆಯೇ ಎಂದು ವಿಚಾರಿಸಿ ಮಾಹಿತಿ ಪಡೆದುಕೊಂಡರು.

ಜೈಲಿನ ಸುರಕ್ಷತೆ ಕುರಿತು ಮಾಹಿತಿ ಪಡೆದ ತಂಡ, ಜೈಲಿನಲ್ಲಿ ಸಿಸಿ ಕ್ಯಾಮೆರಾ ಸಂಖ್ಯೆ ಹೆಚ್ಚಿಸಲು ಸಲಹೆ ನೀಡಿದರು. ಅನಾರೋಗ್ಯಕ್ಕೆ ತುತ್ತಾಗುವ ಜೈಲುವಾಸಿಗಳು ಔಷಧಿಯನ್ನು ಸಿಬ್ಬಂದಿಗಳ ಸಮಕ್ಷಮವೇ ಸೇವಿಸಬೇಕು. ಔಷಧಿ ಸೇವಿಸದೆ, ಹಾಗೆಯೇ ಇರಿಸಿಕೊಂಡು, ಒಂದೇ ಬಾರಿ ಎಲ್ಲ ಔಷಧಿ ಸೇವಿಸಿದರೂ ಕೂಡ ಅವರ ಆರೋಗ್ಯಕ್ಕೆ ತೊಂದರೆಯಾಗುತ್ತದೆ.

ಕಾರಾಗೃಹದಲ್ಲಿ ಧ್ಯಾನ

ಶಿಬಿರಗಳನ್ನು ನಿರಂತರವಾಗಿ ಆಯೋಜಿಸಬೇಕು. ಜೈಲುವಾಸಿಗಳ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜೈಲು ಅಧೀಕ್ಷಕರಾದ ಲತಾ ಅವರು ಉಪಸ್ಥಿತರಿದ್ದು, ಜೈಲಿನ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಜೈಲಿನಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಫಾಗಿಂಗ್ ಮಾಡಿಸುವುದು ಹಾಗೂ ಕಿಟಕಿಗಳಿಗೆ ಸೊಳ್ಳೆಗಳು ಜೈಲು ಕೋಣೆಗಳನ್ನು ಪ್ರವೇಶಿಸದಂತೆ ಪರದೆಯನ್ನು ಹಾಕಿಸಲು ಸಲಹೆ ನೀಡಿದರು.

*ಬಿಮ್ಸ್ ಆಸ್ಪತ್ರೆ:*

ಬಳ್ಳಾರಿ ವೈದ್ಯಕೀಯ ಸಂಶೋಧನಾ ಮಹಾವಿದ್ಯಾಲಯ ಆಸ್ಪತ್ರೆಯ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ, ಹೊರರೋಗಿ ಮತ್ತು ಒಳರೋಗಿಗಳ ಬಳಿ ಸಂವಾದ ನಡೆಸಿ, ಆರೋಗ್ಯ ಸೇವೆಯಲ್ಲಿ ಹಣದ ಆಮಿಷ ಒಡ್ಡುತ್ತಿದ್ದಾರೆಯೇ? ಎಂದು ವಿಚಾರಿಸಿದರು. ಬಳಿಕ ಹೆರಿಗೆ ಕೋಣೆ ಸೇರಿದಂತೆ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿದರು.

*ಬುದ್ಧಿಮಾಂದ್ಯ ಬಾಲಕರ ಸರ್ಕಾರಿ ಬಾಲಮಂದಿರ:*

ಕಂಟೋನ್‍ಮೆಂಟ್‍ನ ಶಾಂತಿಧಾಮ ಆವರಣದ ಬುದ್ಧಿಮಾಂದ್ಯ ಬಾಲಕರ ಸರ್ಕಾರಿ ಬಾಲಮಂದಿರಕ್ಕೆ ಭೇಟಿ ನೀಡಿದ ತಂಡ, ಬಾಲಮಂದಿರದ ಮಕ್ಕಳ ವಿವರ ಪಡೆದುಕೊಂಡರು. ಮಕ್ಕಳನ್ನು ಕಾಲಾನುಮಿತಿಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು.

ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಬಾಲಮಂದಿರವನ್ನು ಸ್ವಚ್ಛವಾಗಿರಿಸಬೇಕು, ರಕ್ಷಣೆ ಸೇವೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗಬಾರದು ಎಂದು ಬಾಲಮಂದಿರದ ಅಧೀಕ್ಷಕರಿಗೆ ಸೂಚಿಸಿದರು.

*ನಿರಾಶ್ರಿತರ ಪರಿಹಾರ ಕೇಂದ್ರ:*

ಶಾಂತಿಧಾಮದ ಆವರಣದ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತ ಪರಿಹಾರ ಕೇಂದ್ರದ ಪುರುಷರ ವಿಭಾಗ ಹಾಗೂ ಮಹಿಳಾ ವಿಭಾಗಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಊಟ, ವಸತಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ವಿಚಾರಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ತಹಶೀಲ್ದಾರ ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande