ನವದೆಹಲಿ,9 ಜನವರಿ (ಹಿ.ಸ.) :
ಆ್ಯಂಕರ್ :ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದಿನಿಂದ ಮೇಘಾಲಯ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ.
ಮೇಘಾಲಯದ ಉಮಿಯಮ್‌ನಲ್ಲಿ ಈಶಾನ್ಯ ಗುಡ್ಡಗಳ ಪ್ರದೇಶಕ್ಕಾಗಿ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಸಂಶೋಧನಾ ಸಂಕೀರ್ಣದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಒಡಿಶಾದ ಭುವನೇಶ್ವರದಲ್ಲಿ ೧೮ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ