ಭುವನೇಶ್ವರ್, 9 ಜನವರಿ (ಹಿ.ಸ.):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಭುವನೇಶ್ವರದಲ್ಲಿಂದು ೧೮ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ಔಪಚಾರಿಕವಾಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಅನಿವಾಸಿಗಳು ಜಗತ್ತಿನ ರಾಯಭಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಅನಿವಾಸಿಗಳು ಸದಾ ಭಾರತದ ರಾಯಭಾರಿಗಳೆಂದು ಪರಿಗಣಿಸಿದ್ದು, ಅವರ ಸಾಧನೆಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ವಿಶ್ವದಾದ್ಯಂತ ಅವರಿಂದ ಪಡೆದ ಪ್ರೀತಿ ಹಾಗೂ ಗೌರವ ಅವಿಸ್ಮರಣೀಯವಾಗಿದೆ. ಜಗತ್ತಿನೆಲ್ಲೆಡೆ ಇರುವ ಅನಿವಾಸಿ ಭಾರತೀಯರು ಶ್ರೇಷ್ಠ ಸಾಧನೆ ಮಾಡಿದ್ದಾರೆ. ಅವರ ಸಾಧನೆಗಳು ದೇಶವನ್ನು ಹೆಮ್ಮೆ ಪಡುವಂತೆ ಮಾಡಿವೆ ಎಂದು ಪ್ರಧಾನಿ ಹೇಳಿದರು.
ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಂದ ಭಾರತದ ಮೌಲ್ಯಗಳ ಗೌರವ ಹೆಚ್ಚಿದೆ. ಕಳೆದ ೧೦ ವರ್ಷಗಳಲ್ಲಿ ಹಲವಾರು ವಿಶ್ವ ನಾಯಕರನ್ನು ಭೇಟಿಯಾದಾಗ ಅವರೆಲ್ಲರೂ ಭಾರತೀಯ ಅನಿವಾಸಿಗಳನ್ನು ಶ್ಲಾಘಿಸಿದ್ದಾರೆ ಎಂದು ಹೇಳಿದರು.
ಭಾರತದ ಪ್ರಜಾಪ್ರಭುತ್ವದ ನೀತಿಯ ಮಹತ್ವವನ್ನು ವಿವರಿಸಿದ ಪ್ರಧಾನಿ ಭಾರತ ಕೇವಲ ಪ್ರಜಾಪ್ರಭುತ್ವದ ತಾಯಿ ಮಾತ್ರವಲ್ಲ, ಪ್ರಜಾಪ್ರಭುತ್ವವು ನಮ್ಮ ಜೀವನ ವಿಧಾನದಲ್ಲಿ ಬೇರೂರಿದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ