ರಾಜ್ಯ ಮಟ್ಟದ ಥ್ರೋಬಾಲ್ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ
ರಾಜ್ಯ ಮಟ್ಟದ ಥ್ರೋಬಾಲ್ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ
ಚಿತ್ರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿ ಆರಂಭವಾದ ರಾಜ್ಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಡಿ.ಟಿ ಶ್ರೀನಿವಾಸ್ ಉದ್ಘಾಟಿಸಿದರು


ರಾಜ್ಯ ಮಟ್ಟದ ಥ್ರೋಬಾಲ್ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ.

ಕೋಲಾರ, ೦೯ ಜನವರಿ (ಹಿ.ಸ.):ಆಂಕರ್: ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿಭಾಗದ ಬಾಲಕರ ಮತ್ತು ಬಾಲಕಿಯರ ಥ್ರೋಬಾಲ್ ಕ್ರೀಡಾಕೂಟಕ್ಕೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಸೇರಿದಂತೆ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಗ್ರಾಮದ ಗ್ರಾಮೀಣ ವಿದ್ಯಾ ಸಂಸ್ಥೆಯ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ದೈಹಿಕ ಶಿಕ್ಷಕರ ಸಂಘ, ಗ್ರಾಮೀಣ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೨೦೨೪-೨೫-ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರ ಅನುಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಪ್ರಾರಂಭಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾತನಾಡಿ. ಶಿಕ್ಷಣ ಹಾಗೂ ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ನಿರಂತರ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಾಗುತ್ತದೆ.ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ತರುವ ದೃಷ್ಟಿಯಿಂದ ಸರ್ಕಾರ ಅನೇಕ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಮಕ್ಕಳಲ್ಲಿ ದೈಹಿಕ ದೃಢತೆ ಹಿತಾಸಕ್ತಿಯಿಂದ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಿದಾಗ ಜೀವನದಲ್ಲಿ ಉತ್ತಮ ಸಾಧನೆ ಮಾಡಬಾರದು ನಾನು ಸಹ ವಿದ್ಯಾರ್ಥಿ ದಿನಗಳಲ್ಲಿ ಕಬ್ಬಡಿ ಆಟಗಾರನ್ನಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾನೆ, ಕ್ರೀಡೆಯು ಪೊಲೀಸ್ ಹಾಗೂ ಸೈನಿಕ ಹುದ್ದೆಗಳಿಗೆ ಹೋಗುವುದಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಶಾಲಾ ಕಾರ್ಯದರ್ಶಿ ಅ.ಮು.ಲಕ್ಷ್ಮೀನಾರಾಯಣ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಬಂದಿರುವ ತಂಡಗಳಲ್ಲಿ ವಿಜೇತ ತಂಡಗಳಿಗೆ ಇಲಾಖೆಯಿಂದ ನೀಡುವ ಬಹುಮಾನದ ಜೊತೆಗೆ ತಾವು ಸಹ ವೈಯಕ್ತಿಕವಾಗಿ ವಿಶೇಷ ಬಹುಮಾನ ನೀಡುವುದಾಗಿ ಘೋಷಿಸಿದರು.

ಕಾರ್ಯಕ್ರಮದಲ್ಲಿ ಉಪ ನಿರ್ದೇಶಕ ಕೃಷ್ಣ ಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹ ಮೂರ್ತಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಪ್ಪೋಜಿ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಜಬಿದಾ ಬೇಗಂ, ಪ್ರಾಂಶುಪಾಲರಾದ ಮಲ್ಲಿಕಾರ್ಜುನ್, ಶ್ರೀಮತಿ ವಿಜೇಂದ್ರ, ಕೋಶಾಧಿಕಾರಿ ಪ್ರಭಾಕರ್, ಮುಖ್ಯ ಶಿಕ್ಷಕಿ ಮಂಜುಳಾ, ಸಹಾಯಕ ನಿರ್ದೇಶಕಿ ಗೀತಾ, ಪಿಎಸೈ ನಾರಾಯಣ ಸ್ವಾಮಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಬು, ದೈಹಿಕ ಶಿಕ್ಷಕರು, ಸಹ ಶಿಕ್ಷಕರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕ್ರೀಡಾಪಟುಗಳು ಹಾಜರಿದ್ದರು.

ಚಿತ್ರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿ ಆರಂಭವಾದ ರಾಜ್ಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಡಿ.ಟಿ ಶ್ರೀನಿವಾಸ್ ಉದ್ಘಾಟಿಸಿದರು

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande