ಹೊಸಪೇಟೆ, 09 ಜನವರಿ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಜ.13 ರಂದು ಬೆಳಗ್ಗೆ 11 ಗಂಟೆಗೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳ ದೈಹಿಕ ಪರೀಕ್ಷೆಯನ್ನು ನಡೆಸಲಾಗುವುದು .ಭಾಗವಹಿಸುವ ಕ್ರೀಡಾ ಪಟುಗಳು ಪ್ರಸ್ತುತ 4ನೇ, 7ನೇ, 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.
ಅರ್ಹರು ವಯಸ್ಸಿನ ಪ್ರಮಾಣ ಪತ್ರ, ಮತ್ತು ಆಧಾರ್ ಕಾರ್ಡನೊಂದಿಗೆ ಆಗಮಿಸಬೇಕು.ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಜ.27, 28 ರಂದು ಬೆ.11 ಗಂಟೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಭಾಗವಹಿಸಲು ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎಂ.ಜಾಕಿರ್- 9036335986, ಮಹ್ಮದ್ ಮಸೂದ್-9886688858 ತರಬೇತಿದಾರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್