ತಿರುಪತಿ,9 ಜನವರಿ (ಹಿ.ಸ.) :
ಆ್ಯಂಕರ್ :ಆಂಧ್ರಪ್ರದೇಶದ ಸುಪ್ರಸಿದ್ದ ತೀರ್ಥಕ್ಷೇತ್ರ ತಿರುಪತಿ-ತಿರುಮಲದಲ್ಲಿ ನಿನ್ನೆ ಸಂಭವಿಸಿದ ಕಾಲ್ತುಳಿತ ಪ್ರದೇಶಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಹಲವು ಸಚಿವರು ಹಾಗೂ ಸ್ಥಳೀಯ ಮುಖಂಡರು ಕಾಲ್ತುಳಿತ ಹಾಗೂ ನೂಕುನುಗ್ಗಲು ಉಂಟಾದ ಪ್ರದೇಶಗಳ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿ ಚಂದ್ರಬಾಬು ಅವರು ಜಿಲ್ಲಾಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕೇಳಿ ವಿವರ ಪಡೆದರು. ತಿರುಪತಿತಿರುಮಲದೇವಸ್ಥಾನಆಡಳಿತಮಂಡಳಿಯ ಅಧಿಕಾರಿಗಳು ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು.ಕಾಲ್ತುಳಿತ ಘಟನೆ ಕುರಿತು ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯ ಅಧಿಕಾರಿಗಳು ಮುಖ್ಯಮಂತ್ರಿ ಚಂದ್ರಬಾಬು ಅವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಚಂದ್ರಬಾಬು ಆಕ್ರೋಶ ವ್ಯಕ್ತಪಡಿಸಿದರು.ಅವರ ಜತೆಗೆ ಇದ್ದ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಭಕ್ತರ ನೂಕುನುಗ್ಗಲು ಹೆಚ್ಚುತ್ತಿರುವಾಗ ಟಿಟಿಡಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಆಂಬ್ಯುಲೆನ್ಸ್‌ಗಳ ಲಭ್ಯತೆಯ ಬಗ್ಗೆ ವಿಚಾರಿಸಿದರು. ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು. ಸಂತ್ರಸ್ತರಿಗೆ ನೀಡುತ್ತಿರುವ ವೈದ್ಯಕೀಯ ಚಿಕಿತ್ಸೆ ಕುರಿತು ಮುಖ್ಯಮಂತ್ರಿ ಚಂದ್ರ ಬಾಬು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ