ನವದೆಹಲಿ, 9 ಜನವರಿ (ಹಿ.ಸ.) :
ಆ್ಯಂಕರ್ :
ಆಂಧ್ರಪ್ರದೇಶದ ಸುಪ್ರಸಿದ್ದ ತೀರ್ಥಕ್ಷೇತ್ರ ತಿರುಪತಿ-ತಿರುಮಲದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿನ ಸಾವು-ನೋವುಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು,ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಗೊಂಡವರು ತ್ವರಿತವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಈ ನಡುವೆ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಮೃತಪಟ್ಟ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿ, ಗಾಯಗೊಂಡವರು ತ್ವರಿತವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆಯಲ್ಲಿ ತೊಂದರೆಗೊಳಗಾದವರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ಕಲ್ಪಿಸಲಿದೆ ಎಂದು ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ