ಹರಿಯಾಣ ಐಪಿಎಸ್ ಅಧಿಕಾರಿ ಆತ್ಮಹತ್ಯೆ : ವರದಿ ಕೇಳಿದ ಪರಿಶಿಷ್ಟ ಜಾತಿ ಆಯೋಗ
ನವದೆಹಲಿ, 10 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹರಿಯಾಣದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಸಾವಿನ ಪ್ರಕರಣವನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ರಾಜ್ಯ ಮುಖ್ಯ ಕಾರ್ಯದರ್ಶಿಯಿಂದ ಏಳು ದಿನಗಳಲ್ಲಿ ವಿವರವಾದ ವರದಿ ಸಲ್ಲಿಸಲು ಸೂಚಿಸಿದೆ. ಅಕ್ಟೋ
Ncsc


ನವದೆಹಲಿ, 10 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹರಿಯಾಣದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಸಾವಿನ ಪ್ರಕರಣವನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ರಾಜ್ಯ ಮುಖ್ಯ ಕಾರ್ಯದರ್ಶಿಯಿಂದ ಏಳು ದಿನಗಳಲ್ಲಿ ವಿವರವಾದ ವರದಿ ಸಲ್ಲಿಸಲು ಸೂಚಿಸಿದೆ.

ಅಕ್ಟೋಬರ್ 7 ರಂದು ಚಂಡೀಗಢದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಹರಿಯಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವೈ. ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ ಹಾಗೂ ಅಧಿಕಾರಿಗಳಿಂದ ಚಿತ್ರಹಿಂಸೆ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವಾರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶುಕ್ರವಾರ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ಮೃತ ಅಧಿಕಾರಿಯ ಕುಟುಂಬದಿಂದ ಬಂದ ದೂರು ಮತ್ತು ಆತ್ಮಹತ್ಯೆ ಪತ್ರದ ಪ್ರತಿಯನ್ನು ಸ್ವೀಕರಿಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಆಯೋಗವು ಹರಿಯಾಣದ ಮುಖ್ಯ ಕಾರ್ಯದರ್ಶಿಯ ಜೊತೆಗೆ ಚಂಡೀಗಢದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೂ ನೋಟಿಸ್ ಜಾರಿ ಮಾಡಿದೆ.

ಅವರು ಪ್ರಕರಣಕ್ಕೆ ಸಂಬಂಧಿಸಿದ ಕ್ರಮಗಳು, ತನಿಖೆಯ ಪ್ರಗತಿ ಹಾಗೂ ರಕ್ಷಣಾತ್ಮಕ ಕ್ರಮಗಳ ಕುರಿತು ಏಳು ದಿನಗಳಲ್ಲಿ ಸ್ಪಷ್ಟ ವರದಿ ಸಲ್ಲಿಸಲು ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande