
ಓಸ್ಲೋ, 10 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ಪ್ರತಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa