ಆರ್‌ಟಿಐ ಕಾಯ್ದೆ ದುರ್ಬಲಗೊಳಿಸಿದ ಕೇಂದ್ರ ಸರಕಾರ : ಖರ್ಗೆ ಆರೋಪ
ನವದೆಹಲಿ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಕೇಂದ್ರ ಸರಕಾರದ ವಿರುದ್ದ ವಾಗ್ದಾಳಿ ನಡ
ಆರ್‌ಟಿಐ ಕಾಯ್ದೆ ದುರ್ಬಲಗೊಳಿಸಿದ ಕೇಂದ್ರ ಸರಕಾರ : ಖರ್ಗೆ ಆರೋಪ


ನವದೆಹಲಿ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಕೇಂದ್ರ ಸರಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಖರ್ಗೆ, 2005ರಲ್ಲಿ ಯುಪಿಎ ಸರ್ಕಾರ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಆರ್‌ಟಿಐ ಕಾಯ್ದೆಯನ್ನು ಜಾರಿಗೆ ತಂದಿತ್ತು. ಇದು ಭ್ರಷ್ಟಾಚಾರ ಎದುರಿಸಲು ಮತ್ತು ಸರ್ಕಾರದ ಹೊಣೆಗಾರಿಕೆಯನ್ನು ಖಚಿತಪಡಿಸಲು ಜನಸಾಮಾನ್ಯರ ಕೈಯಲ್ಲಿ ಒಂದು ಶಕ್ತಿಯಾಯುಧವಾಗಿತ್ತು. ಆದರೆ 2014 ನಂತರ ಇದರ ಮೂಲ ಉದ್ದೇಶವೇ ದಾಳಿಗೆ ಒಳಗಾಗಿದೆ ಎಂದಿದ್ದಾರೆ.

ಆರ್‌ಟಿಐ ಕಾಯ್ದೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಹೊಸ ಯುಗಕ್ಕೆ ಅಡಿಪಾಯ ಹಾಕಿತ್ತು. ಆದರೆ ಕಳೆದ 11 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಿದೆ,” ಎಂದು ಖರ್ಗೆ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande