ಬಿಹಾರ ಚುನಾವಣೆಗೆ ಎನ್‌ಡಿಎ ಸೀಟು ಹಂಚಿಕೆ ಚರ್ಚೆ ಅಂತಿಮ ಹಂತಕ್ಕೆ
ನವದೆಹಲಿ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಚರ್ಚೆಗಳು ಅಂತಿಮ ಹಂತಕ್ಕೆ ತಲುಪಿವೆ. ಇಂದು ರಾತ್ರಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಬೆಳ
ಬಿಹಾರ ಚುನಾವಣೆಗೆ ಎನ್‌ಡಿಎ ಸೀಟು ಹಂಚಿಕೆ ಚರ್ಚೆ ಅಂತಿಮ ಹಂತಕ್ಕೆ


ನವದೆಹಲಿ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಚರ್ಚೆಗಳು ಅಂತಿಮ ಹಂತಕ್ಕೆ ತಲುಪಿವೆ. ಇಂದು ರಾತ್ರಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಬೆಳ್ಳಿಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ನಡೆದ ಸಭೆಗೆ ಗೃಹ ಸಚಿವ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ವಿನೋದ್ ತಾವ್ಡೆ ಹಾಗೂ ಬಿಹಾರದ ಹಿರಿಯ ನಾಯಕರು ಹಾಜರಿದ್ದರು.

ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳ ನಡುವೆ ಕೆಲವು ಸ್ಥಾನಗಳ ಕುರಿತು ವಿವಾದ ಮುಂದುವರಿದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande