ಕೊಪ್ಪಳ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪತ್ರಕರ್ತರು ತಾವು ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣ ಪತ್ರ, ಶಿಫಾರಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್ ಅಥವಾ ಸಂಭಾವನೆ ಅಥವಾ ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್‍ಲೈನ್‍ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ ಜಿ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್