ವಿಜಯಪುರ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘ ಉಗ್ರವಾದ ಸಂಘಟನೆ ಅಲ್ಲ. ಇದು ದೇಶದ ಅಭಿವೃದ್ಧಿಗಾಗಿ ಯುವಕರ ಪಡೆ ಆಗಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ಹಾಗೂ ಕಾಂಗ್ರೆಸ್‌ನ ಕೆಲವರು ಆರ್ ಎಸ್ ಎಸ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಚಿವ ಬಗ್ಗೆ ವಿರುದ್ಧ ಕಿಡಿಕಾರಿದರು.
ಆರ್ ಎಸ್ ಎಸ್‌ಗೆ ನೂರು ವರ್ಷ ಪೂರೈಸಿದೆ. ಅದಕ್ಕಾಗಿ ಆರ್ ಎಸ್ ಎಸ್ ಬ್ಯಾನ್ ಮಾಡಲು ಹುನ್ನಾರ ಮಾಡುಲಾಗುತ್ತಿದೆ. ಇನ್ನು ಆರ್ ಎಸ್ ಎಸ್ ಅಂಡರ್ ವರ್ಲ್ಡ್ ಕೆಲಸವನ್ನು ಮಾಡುವುದಿಲ್ಲ. ಬದಲಾಗಿ ಸಾಮಾನ್ಯ ಜನರ ಕಷ್ಟ, ಏಳಿಗೆಗಾಗಿ ಶ್ರಮಿಸುತ್ತಾರೆ. ಸಚಿವ ಪ್ರಿಯಾಂಕ ಖರ್ಗೆ ತಮ್ಮ ಹೇಳಿಕೆ ಹಿಂಪಡೆಯಬೇಕು. ಅಲ್ಲದೇ, ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಬಿಹಾರ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ಪಷ್ಟ ಬಹುಮತ ಸಿಗುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande