ಹಾಸ್ಯ ಕಲಾವಿದ ರಾಜು ತಾಳಿಕೋಟಿ ನಿಧನ
ಉಡುಪಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ರಂಗಾಯಣದ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ರಾಜು ತಾಳಿಕೋಟಿ ತೀವ್ರ ಹೃದಯಾಘಾತದಿಂದ ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೈನ್ ಶೆಟ್ಟಿ ನಿರ್ಮಾಣದ ಶಂಕರಾಭರಣ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅವರು, ಕಳೆದ ರಾತ್ರಿ ಹೆಬ್ರಿ
Raju


ಉಡುಪಿ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ರಂಗಾಯಣದ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ರಾಜು ತಾಳಿಕೋಟಿ ತೀವ್ರ ಹೃದಯಾಘಾತದಿಂದ ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶೈನ್ ಶೆಟ್ಟಿ ನಿರ್ಮಾಣದ ಶಂಕರಾಭರಣ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅವರು, ಕಳೆದ ರಾತ್ರಿ ಹೆಬ್ರಿಯಲ್ಲಿ ಹೃದಯಾಘಾತಕ್ಕೆ ಒಳಗಾದ ಹಿನ್ನೆಲೆಯಲ್ಲಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ ರಾಜು ತಾಳಿಕೋಟಿ ನಿಧನರಾಗಿದ್ದಾರೆ.

ರಾಜು ತಾಳಿಕೋಟಿ ಕನ್ನಡ ನಾಟಕ ಮತ್ತು ಚಲನಚಿತ್ರಗಳಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿದ್ದರು, ಇತ್ತೀಚೆಗೆ ಸರಕಾರ ಇವರನ್ನು ಧಾರವಾಡ ರಂಗಾಯಣಕ್ಕೆ ನಿರ್ದೇಶಕರನ್ನಾಗಿ ನೇಮಿಸಿತ್ತು. ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರಾದ ರಾಜು ಪ್ರಸ್ತುತ ವಿಜಯಪುರ ಜಿಲ್ಲೆಯ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.

ಖಾಸ್ಗತೇಶ್ವರ ನಾಟಕ ಮಂಡಳಿ, ತಾಳಿಕೋಟಿಯ ಮಾಲಿಕರಾಗಿದ್ದು, ಪ್ರಖ್ಯಾತ ನಾಟಕಗಳು ಕಲಿಯುಗದ ಕುಡುಕ, ಕುಡುಕರ ಸಾಮ್ರಾಜ್ಯ, ಅಸಲಿ ಕುಡುಕ, ನಾಟಕಗಳ ಮೂಲಕ ಖ್ಯಾತಿ ಪಡೆದಿದ್ದ ತಾಳಿಕೋಟಿ ಹಲವು ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ಅಭಿನಯಸಿದ್ದರು.

ರಾಜು ತಾಳಿಕೋಟಿ ನಿಧನಕ್ಕೆ ರಂಗಭೂಮಿ‌ ಹಾಗೂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande